ರೋಮಾಪುರದವರಿಗೆ 8—16

ರೋಮಾಪುರದ ಕ್ರೈಸ್ತರಿಗೆ ಬರೆಯಲ್ಪಟ್ಟಿರುವ ಪ್ರೇರಿತ ಪತ್ರಿಕೆಯು ರಕ್ಷಣೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವದರಿಂದಾಗಲಿ, ವೈಯಕ್ತಿಕ ಹಿರಿಮೆ ಅಥವಾ ಒಳ್ಳೇತನದಿಂದಾಗಲಿ ಸಿಕ್ಕುವದಿಲ್ಲ ಎಂಬುದನ್ನು ವಿವರಿಸುತ್ತದೆ. ಯಾರೇ ಆಗಲಿ ಸಹ ರಕ್ಷಿಸಲ್ಪಡಬಹುದು ಎಂದು ಪೌಲನು ವಿವರಿಸುತ್ತಾನೆ-ಆದರೆ ದೇವರಿಗೆ ವಿಧೇಯರಾಗಿ ನಂಬಿಕೆಯಿಂದ ಜೀವಿಸುವವರ ಮೇಲೆ ಮಾತ್ರವೇ ಅದು ದೇವರ ಕೃಪೆಯಿಂದ ಸುರಿಸಲ್ಪಡುತ್ತದೆ. ಈ ಸಂದೇಶವು ಇಂದಿನ ಜನರಿಗೆ ಅತ್ಯಂತ ಮಹತ್ವದ್ದಾಗಿದ್ದು ಡೇವಿಡ್ ಎಲ್. ರೋಪರ್ರಿಂದ ಜಾಗರೂಕತೆಯಿಂದ ಪರಿಶೀಲಿಸಲ್ಪಡುತ್ತದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ಹಾಗೂ ಇತರರೊಂದಿಗೆ ಹಂಚಿಕೊಳ್ಳಲು ಸುಲಭವಾದ ರೀತಿಯಲ್ಲಿ ನಮ್ಮ ಮುಂದಿಡುತ್ತಾರೆ.


ಕೋರ್ಸಿನಲ್ಲಿ ಏನೇನಿರುತ್ತದೆ?

ಈ 50-ದಿನಗಳ ಕೋರ್ಸಿನಲ್ಲಿ ನಿಮಗೆ ಬೇಕಾದುದೆಲ್ಲವೂ ಇರುತ್ತದೆ. ಈ ಕೋರ್ಸನ್ನು ಮುಗಿಸಲು ನಿಮಗೆ ಹೆಚ್ಚಿನ ಸಮಯದ ಆವಶ್ಯಕತೆಯಿದ್ದಲ್ಲಿ, ನಿಮ್ಮ ಕೋರ್ಸನ್ನು ಹೆಚ್ಚುವರಿ 30 ದಿನಗಳಿಗಾಗಿ ವಿಸ್ತರಿಸಬಹುದು. ಕೆಲವು ಮಾದರಿ ಪಠ್ಯ ಸಾಮಗ್ರಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಡಿಜಿಟಲ್ ಪುಸ್ತಕ

ರೋಮಾಪುರದವರಿಗೆ 8—16 ರವರು ಬರೆದಿರುವ ಡೇವಿಡ್ ಎಲ್. ರೋಪರ್ಪುಸ್ತಕದ ಡಿಜಿಟಲ್ ಪ್ರತಿಯು ಕೋರ್ಸಿನ ನಿಮ್ಮ ಅಧ್ಯಾಪಕರಾಗಿರುತ್ತಾರೆ, ಮತ್ತು ಕೋರ್ಸ್ ಮುಗಿದ ಬಳಿಕವೂ ಅದನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಬಹುದು.

ಐದು ಅಧ್ಯಯನ ಗೈಡ್ ಗಳು

ನೀವು ಓದುವಾಗ ಸ್ಥೂಲವಾಗಿ ಗಮನಿಸಬೇಕಾದ ಪ್ರಮುಖ ಪದಗಳು, ವಿಷಯಗಳು, ಜನರು ಮತ್ತು ಸ್ಥಳಗಳನ್ನು ಒದಗಿಸುವ ಮೂಲಕ ನೀವು ಪರೀಕ್ಷೆಗಳಿಗೆ ಸಿದ್ಧರಾಗಲು ಇವು ನಿಮಗೆ ಸಹಾಯ ಮಾಡುತ್ತವೆ.

ಆರು ಪರೀಕ್ಷೆಗಳು

ನಿಮ್ಮ ವೇಗಕ್ಕೆ ತಡೆಯೊಡ್ಡುವ ಬದಲು ನಿಮಗೆ ಸಹಾಯ ಒದಗಿಸಲು ರೂಪಿಸಲಾಗಿರುವ ಪ್ರತಿ ಪರೀಕ್ಷೆಯು, ಕಲಿಸಿರುವುದು ನಿಮಗೆ ಅರ್ಥವಾಗಿದೆ ಎಂದು ಖಚಿತಪಡಿಸಿಕೊಳ್ಳುವುದಕ್ಕಾಗಿ ನಿಗದಿತ ಓದುವಿಕೆಯ ಭಾಗದಿಂದ ತೆಗೆದುಕೊಳ್ಳಲಾದ ಐವತ್ತು ಪ್ರಶ್ನೆಗಳನ್ನು ಹೊಂದಿರುತ್ತದೆ. ಕೊನೆಯ ಪರೀಕ್ಷೆಯು ಸಮಗ್ರ ಪರೀಕ್ಷೆಯಾಗಿರುತ್ತದೆ.

ರೀಡಿಂಗ್ ಪೇಸ್ ಗೈಡ್

ನಿಮ್ಮ ರೀಡಿಂಗ್ ಪೇಸ್ ಕೈಪಿಡಿಯ ಸಹಾಯದಿಂದ ನಿಮ್ಮ ಓದುವಿಕೆಯ ವೇಳಾಪಟ್ಟಿಗೆ ಅನುಗುಣವಾಗಿರಿ. ನೀವು ಕೋರ್ಸನ್ನು ಅಪೇಕ್ಷಿತ ಸಮಯಾವಧಿಯಲ್ಲಿ ಮುಗಿಸಲು ಪ್ರತಿ ದಿನ ಯಾವ ಪುಟಗಳನ್ನು ಓದಬೇಕು ಎಂದು ಈ ಕೈಪಿಡಿಯು ತಿಳಿಸುತ್ತದೆ.